ಇಂದು ಪಿಂಚಣಿ ಅದಾಲತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಪಿಂಚಣಿದಾರರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ಸಂಬಂಧಿಸಿದ ಪಿಂಚಣಿ ಅದಾಲತ್ ನಡೆಯಲಿದೆ.

ಮೂರು ಜಿಲ್ಲೆಗಳಲ್ಲಿ ವಾಸವಿರುವ ಪಿಂಚಣಿದಾರರು ಈ ಅದಾಲತ್‍ನಲ್ಲಿ ಭಾಗವಹಿಸಿ, ತಮ್ಮ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ ಎಂದು ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಅರಂತೋಡು: ಸಂಭ್ರಮದ ಈದ್ ಮಿಲಾದ್ ಆಚರಣೆ- ಆಕರ್ಷಕ ರ‍್ಯಾಲಿ

error: Content is protected !!
Scroll to Top