ಸಿಡಿಲು ಬಡಿದು ಸುಟ್ಟು ಕರಕಲಾದ ದಿನಸಿ ಅಂಗಡಿ- ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 11. ಸಿಡಿಲು ಬಡಿದು ದಿನಸಿ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಘಟನೆ ರಾಣಿಪುರದಲ್ಲಿ ದು ಮುಂಜಾನೆ ಸಂಭವಿಸಿದೆ.

ಪಕ್ಕದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು, ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ರಾಣಿಪುರ ಚರ್ಚ್ ಎದುರಿನಲ್ಲಿರುವ ಪೀಟರ್ ಆಪ್ರೋಸ್ ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ಘಟನೆಯ ವೇಳೆ ಪೀಟರ್ ನಿದ್ರಿಸುತ್ತಿದ್ದರು. ಅಂಗಡಿ‌ಗೆ ಬೆಂಕಿ ಬಿದ್ದಿರುವುದನ್ನು ಕಂಡು ದಾರಿಯಲ್ಲಿ ತೆರಳುತ್ತಿದ್ದ ವ್ಯಕ್ತಿ ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೀಟರ್, ಅಗ್ನಿ ಶಾಮಕ ದಳಕ್ಕೆ ಕರೆಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿಗಳು ಬೆಂಕಿಯನ್ನ ನಂದಿಸಿದ್ದಾರೆ. ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ದಾಸ್ತಾನು ಸುಟ್ಟು ಕರಕಲಾಗಿದ್ದು ಮೂರು ರೆಫ್ರಿಜರೇಟರ್ ಸುಟ್ಟಿವೆ. ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿವೆ. ಅಂಗಡಿ ಹಾಗೂ ಮನೆ ಒಟ್ಟಿಗೆ ಇದ್ದು ಗೋಡೆ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ, ಮಾಜಿ ಉಪಾಧ್ಯಕ್ಷ ನವೀನ್ ಡಿ ಸೋಜಾ, ಕಂದಾಯ ನಿರೀಕ್ಷರು, ಗ್ರಾಮಲೆಕ್ಕಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಪ್ರಾಥಮಿಕ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಹಲ್ಲೆ ► ಕೊಣಾಜೆ ಶಾಲೆಯಲ್ಲಿ ತರಗತಿ ಬಹಿಷ್ಕಾರ

error: Content is protected !!
Scroll to Top