ಇನ್ನು ಮುಂದೆ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ವಿತರಣೆ ➤ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜು. 11. ಇನ್ನು ಮುಂದೆ ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತಂತೆ ಮಂಗಳವಾರದಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಾರಕ್ಕೆ 2 ಮೊಟ್ಟೆ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೆ, ಅದರಂತೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿ ವಾರಕ್ಕೆ 2 ಮೊಟ್ಟೆ ನೀಡಲು ಅನುಮತಿ ನೀಡಿದ್ದಾರೆ ಎಂದು ತಿಳಿಸಿದರು. ವಾರ್ಷಿಕವಾಗಿ 84 ದಿನ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತದೆ. ಮೊಟ್ಟೆ ತಿನ್ನದೇ ಇರುವವರಿಗೆ ಚಿಕ್ಕಿ ಮತ್ತು ಬಾಳೆಹಣ್ಣು ಕೊಡುವ ವ್ಯವಸ್ಥೆ ಮಾಡಲಾಗಿದೆ. ಗುಣಮಟ್ಟ ಚೆನ್ನಾಗಿಲ್ಲ ಎಂದರೆ ಎಸ್​ಡಿಎಮ್​ಸಿ ಅವರೇ ಜವಾಬ್ದಾರಿ ಎಂದು ತಿಳಿಸಿದರು.

Also Read  ಮೂಡಬಿದಿರೆ: ಗೂಡ್ಸ್ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ

error: Content is protected !!
Scroll to Top