ಮತಎಣಿಕಾ ಕೇಂದ್ರದ ಹೊರಗೆ ಬಾಂಬ್ ಸ್ಫೋಟ- ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ

(ನ್ಯೂಸ್ ಕಡಬ) newskada.com ಪಶ್ಚಿಮ ಬಂಗಾಳ, ಜು. 11.ಹಿಂಸಾಚಾರದ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಚುನಾವಣೆಯ ಮತಎಣಿಕೆಯು ಇಂದು ನಡೆಯುತ್ತಿದ್ದು, ಮತಕೇಂದ್ರದ ಹೊರಗೆ ಬಾಂಬ್ ಸ್ಫೋಟಗೊಂಡಿರುವ ಕುರಿತು ವರದಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ಸ್ಥಳೀಯ ಪಂಚಾಯತ್ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಇದೇ ವೇಳೆ ಮತ ಎಣಿಕೆ ಕೇಂದ್ರದ ಹೊರಗೆ ದೇಶಬಾಂಬ್‌ ಎಸೆಯಲಾಗಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಜುಲೈ 8ರಂದು ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಪಂಚಾಯತ್ ಚುನಾವಣೆಯ ದಿನವೂ ಉದ್ವಿಗ್ನತೆ ಸೃಷ್ಟಿಯಾಗಿದ್ದರಿಂದ ಜುಲೈ 10 ರಂದು 696 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಇಂದು ಬಿಗಿ ಭದ್ರತೆಯ ನಡುವೆ ಮತ ಎಣಿಕೆ ನಡೆದಿದ್ದರೂ ಕೇಂದ್ರದ ಹೊರಗೆ ಬಾಂಬ್ ಸ್ಫೋಟ ನಡೆದಿದೆ.

Also Read  ನಾಲ್ಕು ಹಂತದ ಲಾಕ್‌ಡೌನ್ ವಿಫಲವಾಗಿದೆ, ಮುಂದೇನು?: ರಾಹುಲ್ ಗಾಂಧಿ ಪ್ರಶ್ನೆ

error: Content is protected !!
Scroll to Top