(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ರಾಜ್ಯದ ರೈತರು ಹಾಗೂ ಹಾಲು ಉತ್ಪಾದಕ ಒಕ್ಕೂಟಗಳ ಹಿತದೃಷ್ಟಿಯಿಂದ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ.
ಈ ಕುರಿತು ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಅಮೂಲ್ ಜೊತೆ ನಂದಿನಿ ವಿಲೀನ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ದರ ಎಷ್ಟು ಹೆಚ್ಚಿಸಬೇಕು ಎಂಬುವುದರ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ. ಹಾಲು ಒಕ್ಕೂಟ ಮತ್ತು ಹಾಲು ಉತ್ಪಾದಕರನ್ನು ಉಳಿಸುವ ನಿಟ್ಟಿನಲ್ಲಿ ಅನಿವಾರ್ಯವಾಗಿ ಹಾಲಿನ ದರ ಪರಿಷ್ಕರಣೆ ಮಾಡಲೇಬೇಕಿದೆ ಎಂದು ಹೇಳಿದ್ದಾರೆ.