ಹೃದಯಾಘಾತ- ನೇಪಾಳ ಪ್ರಧಾನಿಗೆ ಪತ್ನಿವಿಯೋಗ

(ನ್ಯೂಸ್ ಕಡಬ) newskadaba.com ನೇಪಾಳ, ಜು. 12. ನೇಪಾಳದ ಪ್ರಧಾನಿ ಪುಷ್ಪ ಕಮಲ್‌ ದಹಾಲ್‌ ಅವರ ಪತ್ನಿ ಸೀತಾ ದಹಾಲ್‌ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.

ವರದಿಗಳ ಪ್ರಕಾರ, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸೀತಾ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಕಠ್ಮಂಡುವಿನಲ್ಲಿ ನಾರ್ವಿಕ್ ಇಂಟರ್ನ್ಯಾಷನಲ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Scroll to Top