ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಕದಡುವ ಸಂದೇಶ- 21 ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ವಾಟ್ಸಾಪ್, ಫೇಸ್‌ ಬುಕ್, ಇನ್ಸ್ಟಾಗ್ರಾಂ ಹಾಗೂ ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶಗಳನ್ನು ರವಾನಿಸುವವರ ವಿರುದ್ಧ ಒಂದು ತಿಂಗಳಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್‌ ಕುಲದೀಪ್ ಕುಮಾರ್‌ ಆರ್ ಜೈನ್‌ ತಿಳಿಸಿದ್ದಾರೆ.

ಯಾವುದೇ ಒಂದು ಧರ್ಮಕ್ಕೆ ಸಂಬಂಧಿಸಿದ ಪರ ಮತ್ತು ವಿರೋಧ ಸಂದೇಶಗಳನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಹಾಗೂ ಅವುಗಳ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸುವ ವ್ಯಕ್ತಿಗಳ ಮೇಲೆ ಕಮಿಷನರೇಟ್‌ ವ್ಯಾಪ್ತಿಯ ಎಲ್ಲಾ ಠಾಣೆಗಳ ಹಾಗೂ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ವಹಿಸುತ್ತಿದ್ದೇವೆ. ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಯಾವದೇ ಸಂದೇಶ ಹಂಚಿಕೊಂಡು ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಅಪರಾಧ ಪುನರಾವರ್ತಿಸಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಿದ್ದೇವೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ರೈಟ್ ಭಾರತ್ ನ ಹೊಸ ಸ್ಕೀಮ್; ಜನ ಸಮಾನ್ಯರಿಗೆ ತಲುಪುವ ವಿಶಿಷ್ಟ ಯೋಜನೆ, ಹಣ ಕಟ್ಟಿದ ಪ್ರತಿಯೊಬ್ಬರಿಗೂ ಖಚಿತ ಬಹುಮಾನ

error: Content is protected !!
Scroll to Top