ಬಾಲಕಿಯ ಅಪಹರಣಕ್ಕೆ ಯತ್ನಿಸಿದ ಭೂಪ ಅರೆಸ್ಟ್- ಕಿಡ್ನಾಪ್ ಕಾರಣ ಕೇಳಿದ್ರೆ ಅಚ್ಚರಿಪಡೋದಂತು ಗ್ಯಾರಂಟಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜು. 13. ಹಾಡಹಗಲೇ ಟ್ಯೂಷನ್‌ಗೆ ಹೊರಟಿದ್ದ ಬಾಲಕಿಯನ್ನು ಅಪಹರಣಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ 24 ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಬೆಳಗಾವಿಯ ಮಾರುತಿ ನಗರದ ಗಜಾನನ್ ಪಾಟೀಲ್ (40) ಎಂದು ಗುರುತಿಸಲಾಗಿದೆ. ಈತ ಟ್ಯೂಷನ್‌ಗೆಂದು ಹೊರಟಿದ್ದ ಬಾಲಕಿಯೋರ್ವಳನ್ನು ಹೆಗಲ ಮೇಲೆ ಹೊತ್ತೊಯ್ಯುತ್ತಿದ್ದನು. ಬಾಲಕಿಯ ಚೀರಾಟ ಕೇಳಿ ಸ್ಥಳೀಯ ‌ನಿವಾಸಿಗಳು ಆರೋಪಿಯನ್ನು ಬೆನ್ನತ್ತಿದ್ದಾಗ ಆರೋಪಿಯು ಬಾಲಕಿಯನ್ನು ಸ್ಥಳದಲ್ಲೇ ಬಿಟ್ಟು ಓಡಿ ಹೋಗಿ ತಪ್ಪಿಸಿಕೊಂಡಿದ್ದನು. ಘಟನೆಗೆ ಸಂಬಂಧಿಸಿ ದೂರು ದಾಖಲಾಗಿ 24 ಗಂಟೆಯಲ್ಲಿ ಆರೊಪಿಯನ್ನು ಪೊಲೀಸರು ಬಂಧಿಸಿ, ಹಿಂಡಲಗಾ ಜೈಲಿಗೆ ಶಿಫ್ಟ್​ ಮಾಡಲಾಗಿದೆ.

Also Read  ವಶೀಕರಣ ತಂತ್ರ ಮತ್ತು ದಿನ ಭವಿಷ್ಯ

ಪೊಲೀಸ್ ತನಿಖೆಯ ವೇಳೆ ಆರೋಪಿಯು ನನಗೆ ಮದುವೆ ಆಗಿರಲಿಲ್ಲ. ಹಾಗಾಗಿ ಬಾಲಕಿಯ ಅಪಹರಣಕ್ಕೆ ಮುಂದಾಗಿದ್ದೆ ಎಂದಿದ್ದು, ಕೃತ್ಯದ ಹಿಂದಿನ ಉದ್ದೇಶ ಕೇಳಿ ತನಿಖಾಧಿಕಾರಿಗಳೇ ಶಾಕ್ ಆಗಿದ್ದಾರೆ. ಈತನ ನೀಚ ವರ್ತನೆಯಿಂದ ಆತನ ಮನೆಯವರು ಆತನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರೂ ಬುದ್ಧಿ ಕಲಿಯದ ಗಜಾನನ್ ಮಹಿಳೆಯರನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದನು. ಈ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಾಗಿತ್ತು ಎನ್ನಲಾಗಿದೆ.

error: Content is protected !!
Scroll to Top