ಝೈಬುನ್ನಿಸಾ ನಿಗೂಢ ಸಾವಿನ ಸಮಗ್ರ ತನಿಖೆಗೆ ಆಗ್ರಹ ► ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.27. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ತಾಲೂಕು ಸಮಿತಿಯ ವತಿಯಿಂದ ಮೈಸೂರಿನ ಕೆ.ಆರ್. ಪೇಟೆಯ ಅಲ್ಪಸಂಖ್ಯಾತ ವಸತಿ ಶಾಲೆಯಲ್ಲಿ ನಿಗೂಢ ಸಾವನ್ನಪ್ಪಿದ ವಿದ್ಯಾರ್ಥಿನಿ ಝೈಬುನ್ನೀಸಾಳ ಸಾವಿನ ಸಮಗ್ರ ತನಿಖೆ ಹಾಗು ಹೆಚ್ಚಿನ ಪರಿಹಾರ ಮೊತ್ತ ನೀಡುವಂತೆ ಆಗ್ರಹಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಸವಾದ್ ಕಲ್ಲರ್ಪೆ ಮಾತನಾಡಿ, ರಾಜ್ಯದಲ್ಲಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಮಿತಿಮೀರುತ್ತಿದೆ. ಸರಕಾರ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಚುನಾವಣೆಯ ಮೂಲಕ ವಿದ್ಯಾರ್ಥಿ ಸಮಾಜ ತಕ್ಕ‌ ಉತ್ತರ ನೀಡಲಿದೆ. ಎಂದರು. ದಿಕ್ಸೂಚಿ ಭಾಷಣ ಮಾಡಿದ ರಿಯಾಝ್ ಬಳಕ್ಕ, ರಾಜ್ಯದ ಸಚಿವರ ನಿವಾಸಕ್ಕೆ ಐಟಿ ದಾಳಿಯಾದಾಗ ಪ್ರತಿಭಟಿಸುವ ವಿದ್ಯಾರ್ಥಿ ಸಂಘಟನೆಗಳು ಅಮಾಯಕ ವಿದ್ಯಾರ್ಥಿನಿಗೆ ಅನ್ಯಾಯವಾದಾಗ ಪ್ರತಿಭಟಿಸದಿರುವುದು ಖೇದಕರ ಎಂದು ಬೇಸರ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಹರ್ಷಿತ್ ಕುಮಾರ್ ಕುರಿಯ, ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲ್ಲೂಕು ಸಮಿತಿ ಕಾರ್ಯದರ್ಶಿ ರಿಯಾಝ್ ಅಂಕತಡ್ಕ ಸೇರಿದಂತೆ ಹಲವು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಝೀಝ್ ಕಲ್ಲರ್ಪೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Also Read  ಕಡಬ: 108 ಆಂಬ್ಯಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ

error: Content is protected !!
Scroll to Top