(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹಯೋಗದಲ್ಲಿ ಶನಿವಾರದಮದು ಬೆಳಗ್ಗೆ 9.30 ಗಂಟೆಗೆ ಮಾದಕ ವ್ಯಸನ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನದ ಅಂಗವಾಗಿ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸುವರು. ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪೊಲೀಸ್ ಆಯುಕ್ತ ಕುಲ್‍ದೀಪ್ ಕುಮಾರ್ ಆರ್. ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಎಂ., ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಸದಾಶಿವ ಶಾನುಭೋಗ್, ಹಿರಿಯ ಮನೋರೋಗ ತಜ್ಞ ಡಾ. ರವೀಶ್ ತುಂಗಾ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಿಜಿಸ್ಟ್ರಾರ್ ಪ್ರ್ರೊ. ಆಲ್ವಿನ್ ಡಿ’ ಸೋಜ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.