ಅಕ್ಕಿ ಬದಲು ಹಣ ನೀಡುತ್ತಿರುವುದು ತಾತ್ಕಾಲಿಕ…! ➤ ಅನ್ನಬಾಗ್ಯದ ಬಗ್ಗೆ ಸಚಿವರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಪೈಕಿ ಒಂದೊಂದೇ ಯೋಜನೆಗಳ ಜಾರಿಗೆ ಸರಕಾರ ಈಗಾಗಲೇ ಕ್ರಮ ಕೈಗೊಳ್ಳುತ್ತಿದೆ.

ಇದೀಗ ಕರ್ನಾಟಕ ಸರಕಾರವು ಅನ್ನಭಾಗ್ಯ ಯೋಜನೆ ಜಾರಿ ಮಾಡಲು ರಾಜ್ಯದಲಿ ಅಕ್ಕಿ ಕೊರತೆ ಹಿನ್ನೆಲೆ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಹಣವನ್ನು ನೀಡಲು ಮುಂದಾಗಿದೆ.

ಸದ್ಯ ಅನ್ನಭಾಗ್ಯದ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್ ಮುನಿಯಪ್ಪ ಅವರು, ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಹಣ ನೀಡುತ್ತಿರುವುದು ತಾತ್ಕಾಲಿಕ ಮಾತ್ರ. ಮುಂದಿನ ದಿನಗಳಲ್ಲಿ ಪರ್ಯಾಯ ಮಾರ್ಗಗಳಿಂದ ಅಕ್ಕಿ ಖರೀದಿಸಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿ ಜೊತೆಗೆ ಇನ್ನೂ 5 ಕೆಜಿ ಸೇರಿಸಿ 10 ಕೆಜಿ ನೀಡಲಿದ್ದೇವೆ. ಆದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಲಿಲ್ಲ. ಹಾಗಾಗಿ ಸದ್ಯಕ್ಕೆ ಜನರಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತದೆ ಎಂದರು.

Also Read  ಬಾಂಬ್ ಪತ್ತೆದಳದ ಸಿಪಾಯಿ 'ರ್‍ಯಾಂಬೊ' ಇನ್ನಿಲ್ಲ! ➤ ಕರ್ತವ್ಯದಲ್ಲಿರುವಾಗಲೇ ಪ್ರಾಣಬಿಟ್ಟ 'ರ‍್ಯಾಂಬೋ'

error: Content is protected !!
Scroll to Top