(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 15. ಬಾವಿಯ ಕುಡಿಯುವ ನೀರಿನಲ್ಲಿ ಪೆಟ್ರೋಲ್ ವಾಸನೆ ಬರುತ್ತಿದ್ದ ಹಿನ್ನೆಲೆ ಅಧಿಕಾರಿಗಳು ಭೇಟಿ ನೀಡಿದ ಘಟನೆ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ನಡೆದಿದೆ.
ಬೆಳ್ಳಾರೆ ಸಮೀಪದ ಪಂಜಿಗಾರಿನ ದಯಾನಂದ ಗೌಡ ಎಂಬವರ ಮನೆಯ ಬಾವಿಯ ನೀರಿನಲ್ಲಿ ಜುಲೈ 8ರಂದು ತೈಲ ಬೆರಕೆಯಾದಂತೆ ಕಂಡುಬರುತ್ತಿತ್ತು. ಈ ಕುರಿತು ಗ್ರಾಮ ಪಂಚಾಯತ್‌ಗೆ ದೂರು ನೀಡಲಾಗಿತ್ತು. ಬಳಿಕ ನೀರನ್ನು ಪರೀಕ್ಷೆಗೆ ಒಳಪಡಿಸಿದಾಗ ನೀರಿನಲ್ಲಿ ಕ್ಲೋರೈಡ್ ಅಂಶ ಕಡಿಮೆ ಇದ್ದು ನೀರು ಕುಡಿಯಲು ಯೋಗ್ಯವಲ್ಲ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.