ಕೇರಳದ ಮಾಜಿ ಮುಖ್ಯಮಂತ್ರಿ ಊಮನ್ ಚಾಂಡಿ ವಿಧಿವಶ

(ನ್ಯೂಸ್ ಕಡಬ) newskadaba.com ಕೇರಳ, ಜು.18. ಕೇರಳ ಕಾಂಗ್ರೆಸ್ ಮೈತ್ರಿಕೂಟ ಯುಡಿಎಫ್ ನಾಯಕ, ಮಾಜಿ ಮುಖ್ಯಮಂತ್ರಿ ಊಮನ್ ಚಾಂಡಿ (79)ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಶೋಕಾರ್ಥ ಮಂಗಳವಾರದಂದು ಕೇರಳದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ.

Scroll to Top