ಜು.28ರವರೆಗೆ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್(ನ) 2.0 ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 2023ರ ಪ್ಲಾಸ್ಟಿಕ್ ಮುಕ್ತ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ಉತ್ಪನ್ನಗಳನ್ನು 2016ರ ಮಾರ್ಚ್ 11ರಿಂದ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‍ ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್ ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್ ಗಳು, ಪ್ಲಾಸ್ಟಿಕ್ ಸ್ಪೂನ್ ಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್‍ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಥರ್ಮಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ನಿಷೇಧಿಸಲಾಗಿದೆ.

Also Read  ಮಂಗಳೂರು: AI- ಬಳಸಿ ಸ್ಪ್ಯಾಮ್‌ ಕರೆಗಳಿಗೆ ಕಡಿವಾಣ ಹಾಕಿದ ಏರ್‌ಟೆಲ್‌ ನೆಟ್‌ವರ್ಕ್‌

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರ ನಿಯಮ 4(2) ರ ಪ್ರಕಾರ (ತಿದ್ದುಪಡಿಯಂತೆ) “ಪಾಲಿಸ್ಟೆರೀನ್ ಮತ್ತು ವಿಸ್ತರಿತ “ಪಾಲಿಸ್ಟೆರೀನ್ ಸೇರಿದಂತೆ ಮೇಲೆ ತಿಳಿಸಲಾದ ಏಕ ಬಳಕೆಯ ಪ್ಲಾಸ್ಟಿಕ್ (SUP) ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 2022 ರಿಂದ ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ.

 

error: Content is protected !!
Scroll to Top