ಬೆಳ್ಳಂ ಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮೈಸೂರು, ಜು.18. ನಿಂತಿದ್ದ ಟ್ರ್ಯಾಕ್ಟರ್ ಗೆ ಬೆಳ್ಳಂ ಬೆಳಗ್ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನಲ್ಲಿ ವರದಿಯಾಗಿದೆ.


ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಮುಂಜಾನೆ 4.30 ರ ಸುಮಾರಿಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.


ಮೃತರನ್ನು ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

 

Scroll to Top