ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.28. ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4ರನ್ವಯ 2018-19 ನೇ ಸೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಚಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ ಟ್ರಸ್ಟ್ ಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ “ಅರ್ಜಿ ನಮೂನೆ” (Form-I) ರಲ್ಲಿ ದಿನ ಜನವರಿ 31 ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಲು, ಜಂಟಿ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು, ಇವರಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಉದ್ದೇಶಿಸಿ 2016-17 ಮತ್ತು 2017-18 ನೇ ಶೈಕ್ಷಣಿಕ ಸಾಲಿನಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಿ ಈ ಕಛೇರಿಗೆ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ / ಟ್ರಸ್ಟ್ ಗಳು, ಮತ್ತೊಮ್ಮೆ ಹಾಸದಾಗಿ 2018-19 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಮತ್ತೊಮ್ಮೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಆದರೆ ಇಂತಹ ಸಂಸ್ಥೆಗಳು 2018-19 ನೇ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಅನುದಾನರಹಿತ ಪದವಿ ಪೂರ್ವ ಕಾಲೇಜುನ್ನು ಪ್ರಾರಂಭಿಸಲು ಇಚ್ಛಿಸಿದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಂಡಿರುವ ಬಗ್ಗೆ ಪ್ರಸ್ತುತ ಸಾಲಿನ ವೇಳಾಪಟ್ಟಿಯಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಛೇರಿಗೆ ಮನವಿಯನ್ನು ಸಲ್ಲಿಸಬಹುದೆಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ www.pue.kar.nic.in ನ್ನು ಸಂಪರ್ಕಿಸಬಹುದಾಗಿದೆ.

Also Read  ಪರಮೇಶ್ ಮೇಸ್ತ ಪ್ರಕರಣದ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ► ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ: ಐಜಿಪಿ ನಿಂಬಾಲ್ಕರ್

error: Content is protected !!
Scroll to Top