ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್‌‌ ನಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇನ್ನು ಮಹಿಳೆ ನಾಗಮ್ಮ ಕಳೆದ 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.

 

ಮನೆ ಮಾಲಕ ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಯಾವಾಗಲಾದರೂ ಒಮ್ಮೆ ಊರಿಗೆ ಬರುತ್ತಾ ಇದ್ದರು. ಇದೀಗ ಊರಿಗೆ ಬಂದಿರುವ ಅಮೀನ್, ಮನೆ ಹಿಂಬದಿಯ ಡ್ರೈನೇಜ್ ಪಿಟ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹವನ್ನು ಗಮನಿಸಿದ್ದು, ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ ➤ ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ SDPI

error: Content is protected !!
Scroll to Top