ವಿಧಾನಸಭಾ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ಹಾಗೂ ಸದನಕ್ಕೆ ಅಗೌರವ ತೋರಿದ ಹಿನ್ನೆಲೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ವಿಧಾನಸಭಾ ಅಧಿವೇಶನ ಮುಗಿಯುವವರೆಗೆ (ಜು. 21) ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ.

ಅಮಾನತಿಗೊಳಗಾದ ಶಾಸಕರಲ್ಲಿ ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ ಹಾಗೂ ವೇದವ್ಯಾಸ ಕಾಮತ್ ಅವರು ಸೇರಿದ್ದಾರೆ.

ಇವರು ಸದನದ ಬಾವಿಗಿಳಿದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದಲ್ಲದೇ, ಬಜೆಟ್ ಪ್ರತಿಗಳನ್ನು ಹರಿದು ಚೂರು ಚೂರು ಮಾಡಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದಿದ್ದರು. ಸ್ಪೀಕರ್ ಭೋಜನ ವಿರಾಮ ರದ್ದುಪಡಿಸಿ ಕಲಾಪ ಮುಂದುವರಿಸಿದರು. ಬಜೆಟ್ ಮೇಲಿನ ಚರ್ಚೆ ಮುಂದುವರಿದು, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ರಾಜ್ಯ ಸರಕಾರದ ಐದು ಗ್ಯಾರಂಟಿ ಮತ್ತು ಇತರ ಯೋಜನೆಗಳನ್ನು ಹೊಗಳುತ್ತಿದ್ದರು. ಈ ವೇಳೆ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ಮುಂದುವರಿಸಿದ್ದರು.

Also Read  ಆತ್ಮ ನಿರ್ಭರ ಭಾರತ ➤ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಪಂಜದಲ್ಲಿ ಚಾಲನೆ

ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಆಕ್ರೋಶ ಹೊರ ಹಾಕಿದ್ದು, ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಮತದಾರರಿಗೆ ಈ ರೀತಿ ವರ್ತನೆ ತೋರಿ ಅವಮಾನ ಮಾಡಬೇಡಿ ಎಂದರು. ಸಭೆಯನ್ನು 3 ಗಂಟೆಗೆ ಮುಂದೂಡಿದ್ದರು. ಕಾಂಗ್ರೆಸ್ ಶಾಸಕರು ಮತ್ತು ಸಚಿವರು ದಲಿತ ಸಮುದಾಯಕ್ಕೆ ಸೇರಿದ ಉಪಸಭಾಪತಿ ಅವರ ವಿರುದ್ಧ ಈ ರೀತಿ ವರ್ತನೆ ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.

Also Read  ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ

error: Content is protected !!
Scroll to Top