(ನ್ಯೂಸ್ ಕಡಬ) newskadaba.com ಉಡುಪಿ, ಜು. 22. ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಸಮೀಪದ ಒಂತಿಬೆಟ್ಟು ಎಂಬಲ್ಲಿ ನಡೆದಿದೆ.
ಮೃತ ಸ್ಕೂಟರ್ ಸವಾರನನ್ನು ಕೃಷ್ಣ ಪೂಜಾರಿ (57) ಎಂದು ಗುರುತಿಸಲಾಗಿದೆ. ಸ್ಕೂಟರ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.