ಮೊಬೈಲ್ ನೋಡುತ್ತಾ ಬಸ್ ಚಲಾವಣೆ – ಚಾಲಕನ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 24. ಸ್ಟೇಟ್ ಬ್ಯಾಂಕ್ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ನ ಚಾಲಕನೋರ್ವ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಕಂಡ ಪ್ರಯಾಣಿಕರೊಬ್ಬರು ವಿಡಿಯೋ ಸೆರೆಹಿಡಿದಿರುವುದು, ಸದ್ಯ ವೈರಲ್ ಆಗಿದ್ದು, ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಸೂಕ್ತ ಕ್ರಮಕ್ಕಾಗಿ ಆಗ್ರಹ ಕೇಳಿಬರುತ್ತಿದೆ ಎನ್ನಲಾಗಿದೆ.


ಸೈಂಟ್ ಆ್ಯಂಟನಿ ಎಂಬ ಬಸ್ಸಿನ ಚಾಲಕ ನಿರ್ಲಕ್ಷ್ಯ ರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟುವರೆಗೆ, ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಬೇಜವಾಬ್ದಾರಿಯಿಂದ ಬಸ್ ಚಲಾಯಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

Also Read  ಬೆಂಗಳೂರಿನಲ್ಲಿರುವ ನ್ಯಾಶನಲ್ ಕಾನೂನು ವಿಶ್ವವಿದ್ಯಾಲಯದ ಎನ್ ಎಸ್ ಯು ಐ ಉಸ್ತುವಾರಿಯಾಗಿ ಸಿ.ವಿ ಆದಿಲ್ ಅಲಿ ಆಯ್ಕೆ

ಬಸ್ಸಲ್ಲಿ ಅಧಿಕ ಪ್ರಯಾಣಿಕರೂ ಇದ್ದರು ಎಂಬುದನ್ನು ಪ್ರಯಾಣಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಾಲಕನ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

error: Content is protected !!
Scroll to Top