ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು



(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.  ಮಂಗಳೂರಿನ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ(32) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.





ಮಂಗಳೂರಿನ ಬ್ಯಾಚುರಲ್ ಆಫ್ ಹಾಸ್ಪಿಟಲ್ ಆಡ್ಮಿನಿಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಹೋಗಿ ವಾಪಸ್ಸಾಗುವ ವೇಳೆ ಆರೋಪಿಗಳು ಹಿಂಬಾಲಿಸಿ ಬಂದಿದ್ದು, ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.






 

error: Content is protected !!
Scroll to Top