ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ➤ ನಾಲ್ವರಿಗೆ ಗಂಭೀರ ಗಾಯ

Accident

(ನ್ಯೂಸ್ ಕಡಬ)newskadaba.com ವಿಟ್ಲ, ಜು.25. ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.


ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

error: Content is protected !!

Join the Group

Join WhatsApp Group