(ನ್ಯೂಸ್ ಕಡಬ)newskadaba.com ಕೇರಳ, ಜು.25. ಕೃಷಿ ಹೊಂಡದಲ್ಲಿ ಈಜಲು ಹೋಗಿ ಯುವತಿಯೊಬ್ಬಳು ದುರಂತವಾಗಿ ಮೃತಪಟ್ಟ ಘಟನೆ ಜರುಗಿದೆ. 19 ವರ್ಷದ ಸೋನಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ ಮನೆಯ ಸಮೀಪವೇ ಇರುವ ಕೃಷಿ ಉದ್ದೇಶಕ್ಕಾಗಿ ಮಣ್ಣನ್ನು ಅಗೆದು ನಿರ್ಮಾಣ ಮಾಡಿದ್ದ ಹೊಂಡದಲ್ಲಿ ಈ ಘಟನೆ ನಡೆದಿದೆ.
ತಂದೆಯ ಜತೆ ಈಜುವಾಗ ಮಣ್ಣಿನಲ್ಲಿ ಸಿಲುಕಿ, ಅದರಿಂದ ಬಿಡಿಸಿಕೊಳ್ಳಲಾಗದೇ ಸೋನಾ ಕೊನೆಯುಸಿರೆಳೆದಿದ್ದಾಳೆ. ಇದಕ್ಕೂ ಮುನ್ನ ಸ್ಥಳೀಯರಿಗೆ ಈ ಮಾಹಿತಿ ತಿಳಿದು ಸೋನಾಳನ್ನು ಕಾಪಾಡಲು ಸ್ಥಳಕ್ಕೆ ದೌಡಾಯಿಸಿದರೂ ಸಹ ಆಕೆಯನ್ನು ಕಾಪಾಡಲು ಸಾಧ್ಯವಾಗಲಿಲ್ಲ. ತಂದೆಯಿಂದಲೂ ಮಗಳನ್ನು ಉಳಿಸಿಕೊಳ್ಳಲು ಆಗಲಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಸೋನಾಳ ಮೃತದೇಹವನ್ನು ಹೊಂಡದಿಂದ ತೆಗೆದು, ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.