ಇಂದಿನಿಂದ ಮೂರು ದಿನ ‘ಯುವ ಕಾಂಗ್ರೆಸ್ ಸಮಾವೇಶ’

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರತೀಯ ಯುವ ಕಾಂಗ್ರೆಸ್ ನಿಂದ ಬೆಹ್ತರ್ ಭಾರತ್ ಕಿ ಬುನಿಯಾದ್ ಉತ್ತಮ ಭಾರತದ ಬುನಾದಿಗಾಗಿ ಯುವ ರಾಷ್ಟ್ರೀಯ ಸಮಾವೇಶ ನಡೆಯಲಿದೆ ಎಂದು ತಿಳಿದುಬಂದಿದೆ.


ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಈ ಯುವ ಕಾಂಗ್ರೆಸ್ ಸಮಾವೇಶವನ್ನು ಆಯೋಜಿಸಲಾಗಿದೆ. 10.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಈ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. 3 ದಿನಗಳ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ತರೀಖ್ ಅನ್ವರ್ ಸೇರಿದಂತೆ ಮತ್ತಿತ್ತರರು ಪಾಲ್ಗೊಳ್ಳಲಿದ್ದಾರೆ.

Also Read  ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ "ಕೃಷ್ಣ ವರ್ಣಚಿತ್ರ ಚಾವಡಿ" ಉದ್ಘಾಟನೆ


ಭಾರತೀಯ ಯುವ ಕಾಂಗ್ರೆಸ್ ಸಮಾವೇಶವು ಸಮಾರೋಪಗೊಳ್ಳಲಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರು ಭಾಗಿಯಾಗಲಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವಂತ ಯುವ ಕಾಂಗ್ರೆಸ್ ಸಮಾವೇಶ ರಾಷ್ಟ್ರೀಯ ಉಸ್ತುವಾರಿ ಮತ್ತು ಎಐಸಿಸಿ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲಾವಾರು ಜಿ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ ನೇತೃತ್ವದಲ್ಲಿ ನಡೆಯಲಿದೆ.

error: Content is protected !!
Scroll to Top