ಅಂಗಡಿ ಮಾಲಕರೇ ಗಮನಿಸಿ- ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 26. ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಕಲಂ 4(1)ರ ಅನ್ವಯ ಕಾರ್ಮಿಕರಿಲ್ಲದ ಸಂಸ್ಥೆಗಳನ್ನು ಒಳಗೊಂಡಂತೆ ಪ್ರತಿಯೊಂದು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿದೆ.

ಇ-ಕಾರ್ಮಿಕ ವೆಬ್‍ಸೈಟ್ www.ekarmika.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣೆ ಮಾಡಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಕಾರ್ಯವ್ಯಾಪ್ತಿಯ ಹಿರಿಯ ಕಾರ್ಮಿಕ ನಿರೀಕ್ಷಕರು ಹಾಗೂ ಕಾರ್ಮಿಕ ನಿರೀಕ್ಷಕರ ಕಛೇರಿ ಸಂಪರ್ಕಿಸುವಂತೆ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ➤ ಅನಗತ್ಯ ಕೆಲಸಕ್ಕೆ ನಿಷೇಧಾಜ್ಞೆ ಜಾರಿ

error: Content is protected !!
Scroll to Top