ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ; ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವೆ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 26. ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್‌ ನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾನೂನಿನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ವೈರಲ್ ಆಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿರುವುದಾಗಿ ವರದಿಯಾಗಿದೆ.

Also Read  ಕೊರೋನಾ ಕಬಂಭ ಬಾಹು ➤ ಸುಳ್ಯದಲ್ಲಿ 4 ಕೊರೋನಾ ಪಾಸಿಟಿವ್

error: Content is protected !!
Scroll to Top