ಮಂಜೇಶ್ವರ: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ► ತಾಯಿ – ಮಗು ಸೇರಿ ಮೂವರು ಮೃತ್ಯು



(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜ.31. ರೈಲು ನಿಲ್ದಾಣದ ಬಳಿ ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲು ಢಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಮೂವರು ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ.







ಮೃತರನ್ನು ಪೊಸೋಟ್ ನಿವಾಸಿಗಳಾದ ಆಮಿನಾ(45), ಆಯಿಶಾ(43) ಮತ್ತು ಆಯಿಶಾರ ಪುತ್ರ ತಾಮೀಲ್ ಎಂದು ಗುರುತಿಸಲಾಗಿದೆ. ಇವರು ರೈಲು ಹಳಿ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ರೈಲು ಇಂಜಿನ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.






error: Content is protected !!
Scroll to Top