10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು

(ನ್ಯೂಸ್ ಕಡಬ)newskadaba.com ಕೇರಳ, ಜು.28. 11 ಮಂದಿ ಮಹಿಳಾ ಪೌರಕಾರ್ಮಿಕರ ಅದೃಷ್ಟ ಕೈಹಿಡಿದಿದ್ದು, ಬುಧವಾರ ನಡೆದ ಡ್ರಾ ನಂತರ ಕೇರಳ ಲಾಟರಿ ಇಲಾಖೆಯು 10 ಕೋಟಿ ರೂಪಾಯಿಗಳ ಮಾನ್ಸೂನ್ ಬಂಪರ್ ವಿಜೇತರನ್ನು ಘೋಷಿಸಿದ್ದು 11 ಮಂದಿ ಮಹಿಳಾ ಪೌರ ಕಾರ್ಮಿಕರು ವಿಜೇತರಾಗಿದ್ದಾರೆ ಎಂದು ವರದಿ ತಿಳಿಸಿದೆ.


ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ’ಯ 11 ಮಹಿಳೆಯರು ಅಂದರೆ ಒಬ್ಬೊಬ್ಬರು ತಲಾ 25 ರೂ. ಷೇರು ಹಾಕಿ ಟಿಕೆಟ್ ಖರೀದಿಸಿದ್ದರು. ಕುಟ್ಟಿಮಾಲು, ಬೇಬಿ, ಶೋಭಾ, ಪಾರ್ವತಿ, ರಾಧಾ, ಲಕ್ಷ್ಮಿ, ಲೀಲಾ, ಬಿಂದು, ಶೀಜಾ, ಚಂದ್ರಿಕಾ ಮತ್ತು ಕಾರ್ತ್ಯಾಯನಿ ಮಾನ್ಸೂನ್ ಬಂಪರ್ ಪ್ರಥಮ ಬಹುಮಾನ ಪಡೆದವರು.

Also Read  ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ➤ ಚಿನ್ನಾಭರಣ, ನಗದು ಹಾಗೂ ಕಾರು ಕಳವುಗೈದು ಪರಾರಿ


ಮೊದಲು 9 ಮಂದಿ ಸೇರಿ ಲಾಟರಿ ಟಿಕೆಟ್ ಖರೀಸಲು ನೋಡಿದೆವು, ಆದರೆ ಹಣದ ಕೊರತೆಯಿಂದ ಮತ್ತಿಬ್ಬರು ಕಾರ್ಮಿಕರು ಸೇರಿಕೊಂಡರು. ಕೊನೆಗೆ 11 ಮಂದಿ ಸೇರಿದ 250 ರೂಪಾಯಿಯ ಟಿಕೆಟ್ ಖರೀದಿಸಿದೆವು ಎಂದು ಟಿಕೆಟ್ ಖರೀದಿಸಿದ ರಾಧ ತಿಳಿಸಿದ್ದಾರೆ. ಟಿಕೆಟ್ ಸಂಖ್ಯೆ MB 200261 ಮೊದಲ ಬಹುಮಾನ 10 ಕೋಟಿ ರೂ. ಬಹುಮಾನದ ಚೀಟಿಯನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಪರಪ್ಪನಂಗಡಿ ಶಾಖೆಗೆ ಹಸ್ತಾಂತರಿಸಲಾಗಿದೆ ಎನ್ನಲಾಗಿದೆ.

error: Content is protected !!
Scroll to Top