ವಿಡಿಯೋ ಚಿತ್ರೀಕರಣ ಪ್ರಕರಣ- ವಿದ್ಯಾರ್ಥಿನಿಯರಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಉಡುಪಿ, ಜು. 28. ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯವು ಶುಕ್ರವಾರದಂದು ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್, ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ ಎನ್ನಲಾಗಿದೆ.

Also Read  ಕಡಬ: ಯುವ ವಿದ್ವಾಂಸ ರವೂಫ್ ಇರ್ಫಾನಿ ಅಲ್ ಮಖ್ದೂಮಿ ನಿಧನ


ಇದರ ಜೊತೆಗೆ ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗುವುದು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಯೊಡ್ಡದಿರುವುದು ಮತ್ತು ತಲಾ 20,000ರೂ. ಮೊತ್ತದ ಬಾಂಡ್ ನ್ನು ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

error: Content is protected !!
Scroll to Top