ಸಿಟಿ ರವಿಗೆ ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ..! – ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಇತ್ತೀಚಿನ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಪಕ್ಷವು ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಬಿಜೆಪಿಯು ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಸಿ.ಟಿ. ರವಿ ಅವರ ಹೆಸರನ್ನು ಕೈಬಿಡಲಾಗಿದೆ. ಇದರೊಂದಿಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗುತ್ತದೆ ಎಂಬ ಸುದ್ದಿಗಳಿಗೆ ಇಂಬು ಸಿಕ್ಕಂತಾಗಿದೆ. ಇನ್ನು 8 ಮಂದಿ ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಇದೇ ಸಂದರ್ಭ ವಿಧಾನಸಭಾ ಚುನಾವಣೆಯ ವಿಚಾರದಲ್ಲಿ ಹಲವು ಆರೋಪಗಳಿಗೆ ಒಳಗಾಗಿದ್ದ ಬಿ.ಎಲ್‌. ಸಂತೋಷ್‌ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

Also Read  ವಿಕಲಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top