ಮಂಗಳೂರು ವಿಶ್ವ ವಿದ್ಯಾಲಯದ ಮಾಜಿ ಕುಲಪತಿ ಕೆ.ಬೈರಪ್ಪ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.


ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ.


ಇನ್ನು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ತೀವ್ರ ಹೃದಯಾಘಾತಗೊಂಡು ವಿಧಿವಶರಾಗಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top