ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಮೂವರನ್ನು ಬಂಧಿಸಿದ ವಿಟ್ಲ ಪೊಲೀಸರು



(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು.31. ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.





ಬಂಧಿತ ಆರೋಪಿಗಳನ್ನು ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿನ ನಿವಾಸಿ ಅಕ್ಷಯ್ ದೇವಾಡಿಗ (24), ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಚಾಡ (30), ಬೆರಿಪದವು ನಿವಾಸಿ ಸುಕುಮಾರ ಬೆಳ್ಚಾಡ (28) ಎಂದು ಗುರುತಿಸಲಾಗಿದೆ. ಅಕ್ಷಯ್ ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು ಎಂದು ತಿಳಿದುಬಂದಿದೆ.






ವಿಟ್ಲ ಠಾಣೆಯಲ್ಲಿ ಪೊಕ್ಸೋ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಬಾಲಕಿ ನೀಡಿದ ಮಾಹಿತಿಯಂತೆ ಮೂರು ಮಂದಿಯ ಬಂಧನ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

 

error: Content is protected !!
Scroll to Top