ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ FIR ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಹೋಟೆಲ್‌ ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್‌ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ 8ನೇ ಎಸಿಎಂಎಂ ಕೋರ್ಟ್ ಆದೇಶದ ಮೇಲೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿ, ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಶ್ರೀನಿವಾಸ್ ನಾಯ್ಡುಗೆ ಬೆದರಿಕೆ ಹಾಕಿದ್ದರು ಎಂಬ ಆರೋಪ ಹೊರಿಸಲಾಗಿತ್ತು. ಆದರೆ ಘಟನೆಯ ಬಳಿಕ ಶ್ರೀನಿವಾಸ್ ನಾಯ್ಡು ವಿರುದ್ಧವೇ ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್‌ ಪ್ರಕರಣ ದಾಖಲಿಸಿದ್ದರು.

Scroll to Top