(ನ್ಯೂಸ್ ಕಡಬ)newskadaba.com ಉಡುಪಿ, ಆ.02. ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಮೃತ ಬಾಲಕಿಯನ್ನು ಕೃತಿಕಾ(3)ಎಂದು ಗುರುತಿಸಲಾಗಿದೆ.
ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.