(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ಕಾರವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ ಘಟನೆ ಸಂಭವಿಸಿದೆ. ಮಂಗಳೂರಿನ ಹೆಸರಾಂತ ಕಾಲೇಜುವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು. ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.
Also Read ಬಿಸಿಲಿನ ಬೇಗೆಗೆ ಜನ ತತ್ತರ..! ➤ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಸಲಹೆ.!
ಈ ಕುರಿತು 112ಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ಘಟನಾ ಸ್ಥಳಕ್ಕೆ ತೆರಳಿದ DYSP ಅರವಿಂದ ಕಲ್ಲಗುಜ್ಜೆ ನೇತೃತ್ವದ ಪೊಲೀಸ್ ತಂಡ ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ತೆಳ್ಳಾರು ಎಂಬವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.