ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, . 03. ಕರ್ನಾಟಕ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭ ಪ್ರಧಾನಿ ಮೋದಿಗೆ ಶಾಲು ಹೊದಿಸಿ, ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿರುವಂತ ಮೈಸೂರು ದಸರಾ ಅಂಬಾರಿಯನ್ನು ನೀಡಿದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ರಾಜ್ಯಕ್ಕೆ ಬರಬೇಕಾದ ಅನುದಾನಗಳ ಕುರಿತು ಚರ್ಚೆ ನಡೆಸಿದರು ಎನ್ನಲಾಗಿದೆ. ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನೂ ಸಹ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಶಲೋಪರಿ ವಿಚಾರಿಸಿದರು ಎನ್ನಲಾಗಿದೆ.

Also Read  ನಿನ್ನಿಕಲ್ಲು ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಆತ್ಯಹತ್ಯೆಗೆ ಶರಣು

error: Content is protected !!
Scroll to Top