ಬಿಗಿ ಭದ್ರತೆಯೊಂದಿಗೆ ಜ್ಞಾನವ್ಯಾಪಿ ಸರ್ವೇ ಕಾರ್ಯ ಆರಂಭ..!

(ನ್ಯೂಸ್ ಕಡಬ) newskadaba.com ವಾರಣಾಸಿ, ಆ. 04. ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಹಿಂದೂ ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತನ್ನ ಸಮೀಕ್ಷೆಯನ್ನು ಶುಕ್ರವಾರದಂದು ಆರಂಭಿಸಿದೆ.

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಸರ್ವೇ ಕಾರ್ಯ ಆರಂಭಿಸಲಾಗಿದ್ದು, ಮಸೀದಿಗೆ ಭಾರೀ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಶುಕ್ರವಾರದಂದು ಬೆಳಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಂಡವು ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಆವರಣಕ್ಕೆ ಆಗಮಿಸಿದ್ದು, ಬಿಗಿ ಭದ್ರತೆಯ ನಡುವೆ ಸುಮಾರು 7 ಗಂಟೆಗೆ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಪ್ರಾರಂಭವಾಗಿದೆ.

ಎಎಸ್‌ಐ ಸಮೀಕ್ಷೆ ಆರಂಭದ ವೇಳೆ ಜಿಲ್ಲಾಡಳಿತದಿಂದ ನೇಮಿಸಲ್ಪಟ್ವವರು ಮಾತ್ರ ಆವರಣದಲ್ಲಿ ಹಾಜರಿದ್ದರು. ಇದೇ ವೇಳೆ ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿ ಸದಸ್ಯರು ಸಮೀಕ್ಷೆಯನ್ನು ಬಹಿಷ್ಕರಿಸಿದರು ಎನ್ನಲಾಗಿದೆ. ಹಿಂದಿನ ಸಮೀಕ್ಷೆಯ ಸಂದರ್ಭ ಶಿವ ಮತ್ತು ಪಾರ್ವತಿಯ ಶಿಲ್ಪಗಳು, ವರಾಹ, ಗಂಟೆಗಳು, ತ್ರಿಶೂಲಗಳು ಮತ್ತು ಇತರ ಹಲವು ಪುರಾವೆಗಳು ಸೇರಿದಂತೆ ಹಲವು ಕಲಾಕೃತಿಗಳು ಆವರಣದಲ್ಲಿ ಕಂಡುಬಂದಿತ್ತು ಎಂಬುದಾಗಿ ಸೋಹನ್‌ಲಾಲ್ ಆರ್ಯ ಎಂಬವರು ಹೇಳಿದ್ದಾರೆ. ಇನ್ನು ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದು, ಇಂದೇ ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.

error: Content is protected !!

Join the Group

Join WhatsApp Group