ಮಕ್ಕಳನ್ನು ಕೊಂದು ದಂಪತಿಗಳಿಬ್ಬರು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.04. ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆಂಧ್ರ ಮೂಲದ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29)ಅವರು ಇಬ್ಬರು ಮಕ್ಕಳಾದ ಮೋಕ್ಷಾ, ಸೃಷ್ಟಿಯನ್ನು ಕೊಲೆ ಮಾಡಿ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಪಾರ್ಟ್ಮೆಂಟ್ ಒಂದರಲ್ಲಿ ಈ ಘಟನೆ ಸಂಭವಿಸಿದ್ದು, ಮೃತ ವೀರಾರ್ಜುನ್ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಕಾಡುಗೋಡಿ ಠಾಣಾ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Scroll to Top