ಮಹಿಳೆಯರೇ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ – ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್ವೆಲ್..!



(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 04. ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಶರಣ್ ಪಂಪ್ ವೆಲ್, ಹಿಂದೂ ತಾಯಂದಿರು ಸೌಟು, ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು ಎಂದು ಕರೆ ನೀಡಿದ್ದರು. ಪ್ರಕರಣ ಸಂಬಂಧ ಉಡುಪಿ ಪೋಲಿಸರು ಶರಣ್ ಪಂಪ್​​​ವೆಲ್ ವಿರುದ್ದ ಸುಮೋಟ ಕೇಸ್‌ ದಾಖಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.







ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಆರೋಪ ಎದುರಿಸುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವಕೀಲರ ಮೂಲಕ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಪೀಠ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.






error: Content is protected !!
Scroll to Top