ಹಳೆ ದ್ವೇಷ- ಟೊಮೆಟೊ ನಾಶ – 15 ಲಕ್ಷಕ್ಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 04. ಹಳೆಯ ದ್ವೇಷ ಹಾಗೂ ಇನ್ನಿತರ ಕಾರಣಗಳಿಂದ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಟೊಮೆಟೊ ಬೆಳೆಯನ್ನು ನಾಶಪಡಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಮಲೆಯೂರು ಸಮೀಪದ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ.

ರೈತ ಮಂಜು ಎಂಬವರಿಗೆ ಸೇರಿದ ಅಂದಾಜು 15ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಟೊಮೆಟೊ ಬೆಳೆಯನ್ನು ಕಿಡಿಗೇಡಿಗಳು ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಥಳಕ್ಕೆ ಬೇಗೂರು ಪೊಲೀಸರು ಹಾಗೂ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Scroll to Top