ಕ್ರಮಬದ್ಧ ಜೀವನಶೈಲಿ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ – ಪ್ರಾಂಶುಪಾಲ ದಾಮೋದರ ಕಣಜಾಲು..!

(ನ್ಯೂಸ್ ಕಡಬ) newskadaba.com ಅರಂತೋಡು, ಆ. 04. ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಡಾ|| ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕ್ರಮಬದ್ಧವಾದ ಜೀವನಶೈಲಿ ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು.

ಕಾಲೇಜಿನ ಸಂಚಾಲಕರಾದ ರಾಷ್ಟ್ರ ಪ್ರಶಸ್ತಿ ಪುರಸ್ಕತ ಶಿಕ್ಷಕರಾದ  ಶ್ರೀ ಕೆ. ಆರ್ ಗಂಗಾಧರ್ ಮಾತನಾಡಿ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರೊಂದಿಗೆ, ಚಲನಾಶೀಲರಾಗಿರಬೇಕು. ಸಮಾಜದಲ್ಲಿ ಧೈರ್ಯದಿಂದ ಬದುಕುವುದನ್ನು ಎನ್ಎಸ್ಎಸ್ ಕಲಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀ ರಮೇಶ್  ವಹಿಸಿದ್ದರು. ನಿಕಟಪೂರ್ವ ಕಾರ್ಯಕ್ರಮಾಧಿಕಾರಿ ಶ್ರೀ ಗೌರಿಶಂಕರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮಾಧಿಕಾರಿ ಶ್ರೀ ಲಿಂಗಪ್ಪ ಎಂ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪದ್ಮಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಬೋಧಕ  ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Also Read  ಜಿಲ್ಲಾ ಇತಿಹಾಸ ಪರಿಚಯ ➤ ದಕ್ಷಿಣ ಕನ್ನಡ

error: Content is protected !!
Scroll to Top