“ಅನ್ನಭಾಗ್ಯ” ಯೋಜನೆ- 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ; ಸಚಿವ ಮುನಿಯಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, . 04. ಅನ್ನಭಾಗ್ಯ ಯೋಜನೆಯಡಿ ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ರೂ.ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ 5 ಕೆ.ಜಿ ಅಕ್ಕಿ ಮತ್ತು ಉಳಿದ 5 ಕೆ.ಜಿಗೆ ಪ್ರತಿ ಕೆ.ಜಿ ಅಕ್ಕಿಗೆ 34 ರೂ. ನಂತೆ ಒಟ್ಟು 170 ರೂ. ಗಳಂತೆ ಈವರೆಗೆ 1 ಕೋಟಿ ಕುಟುಂಬಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದರು.

ಇನ್ನು ಕರ್ನಾಟಕದಲ್ಲಿ 1.28 ಕೋಟಿ ಪಡಿತರ ಚೀಟಿ ಕುಟುಂಬಗಳಲ್ಲಿ 4.42 ಕೋಟಿ ಫಲಾನುಭವಿಗಳಿದ್ದು, ಈವರೆಗೆ 1 ಕೋಟಿ ಕುಟುಂಬಗಳಿಗೆ 566 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಘೋಷಿಸಿತ್ತು.

Also Read  ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ - ಧಾರ್ಮಿಕ ದತ್ತಿ ಇಲಾಖೆ ಆದೇಶ

error: Content is protected !!
Scroll to Top