ಟ್ರಾನ್ಸ್‌ ಫಾರ್ಮರ್‌ ಸ್ಫೋಟ – ಪಕ್ಕದಲ್ಲೇ ನಿಲ್ಲಿಸಿದ್ದ ಕಾರುಗಳು ಭಸ್ಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 05. ಟ್ರಾನ್ಸ್‌ ಫಾರ್ಮರ್‌ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಪಕ್ಕದಲ್ಲೇ ನಿಲ್ಲಿಸಿದ್ದ ಮರ್ಸಿಡಿಸ್ ಬೆಂಜ್ ಸಹಿತ ಎರಡು ಕಾರುಗಳಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಗರದ ಬಾಣಸವಾಡಿಯ ಸ್ಪೆನ್ಸರ್ ರಸ್ತೆಯಲ್ಲಿ ನಡೆದಿದೆ.

ಘಟನೆಯ ಸಂದರ್ಭ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

Scroll to Top