ಕೋರ್ಟ್ ವಿಚಾರಣೆ ದಿನ ತಪ್ಪಿಸಿಕೊಂಡು ಪರಾರಿಯಾಗಿದ್ದ ಕೈದಿ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಆ.05. ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.


ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೇ ಖಾಕಿ ಬಲೆಗೆ ಈ ಖತರ್ನಾಕ್ ಬಿದ್ದಿದ್ದಾನೆ. ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯುವಾಗ ಹೋಟೆಲ್ ಬಳಿ ಪೊಲೀಸರನ್ನು ನೂಕಿ ಪರಾರಿಯಾಗಿದ್ದನು. ಆ ವೇಳೆ, ಪೊಲೀಸ್ ಸಿಬ್ಬಂದಿಗಳಾದ ಶಿವಾಜಿ ಅವರ ಕಿರುಬೆರಳು ಮುರಿದು, ಕಾಲುಗಳಿಗೆ ಗಾಯವಾಗಿತ್ತು ಎನ್ನಲಾಗಿದೆ.

error: Content is protected !!