ಬಸ್‌ ಗಳಲ್ಲಿ ಕರ್ಕಶ ಹಾರ್ನ್, ಧ್ವನಿವರ್ಧಕ ಬಳಕೆ ವಿರುದ್ಧ ಕಾರ್ಯಾಚರಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ವಾಹನಗಳಿಗೆ ನಿಯಮ ಮೀರಿ ಕರ್ಕಶ ಹಾರ್ನ್ ಅಳವಡಿಸುತ್ತಿದ್ದು, ಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಟ್ರಾಫಿಕ್ ಪೊಲೀಸರು ವಿಶೇಷ ಕಾರ್ಯಾಚರಣೆಗೆ ನಡೆಸಿದ್ದು ಒಟ್ಟಾರೆ 24 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. 2 ಗಂಟೆಗಳ ಕಾಲ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 24 ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಖಾಸಗಿ ಬಸ್‌ಗಳಲ್ಲಿ ಕರ್ಕಶ ಹಾರ್ನ್ ಬಳಕೆ ಮತ್ತು ಬಸ್‌ ನೊಳಗೆ ಧ್ವನಿ ವರ್ಧಕಗಳನ್ನು ಬಳಸುವುದರ ವಿರುದ್ಧ ಸಂಚಾರ ವಿಭಾಗದ ಪೊಲೀಸರು ಮಂಗಳೂರು ನಗರ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆಗಿಳಿದಿದ್ದರು. “ಇಂತಹ ವಿಶೇಷ ಕಾರ್ಯಾಚರಣೆ ಮತ್ತಷ್ಟು ಮುಂದುವರಿಸಲಾಗುವುದು” ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ ಎನ್ನಲಾಗಿದೆ.

Also Read  ಕರಾವಳಿಯಲ್ಲಿ ಮುಂದುವರಿದ ಮುಂಗಾರು ವರ್ಷಧಾರೆ.

 

error: Content is protected !!
Scroll to Top