ಕಡಬ: ಅಪರಿಚಿತ ವಾಹನದಿಂದ ಹಿಟ್ ಆ್ಯಂಡ್ ರನ್ – ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಆ.08. ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ತೆರಳಿದ ಪರಿಣಾಮ ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಗಾಯಾಳುವನ್ನು ಕೊಂಬಾರು ನಿವಾಸಿಗಳೆಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಚಿದಾನಂದ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ‌. ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ವಾಹನದ ಪತ್ತೆಗೆ ಬಲೆ‌ ಬೀಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top