ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28) ಎಂದು ಗುರುತಿಸಲಾಗಿದೆ.


ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನನ್ನು ಕೇರಳದ ಕಾಸರಗೋಡಿನ ಮೀಯಾಪದವು ಬಳಿಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಆರೋಪಿ ನೌಷದ್ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ, ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣ, ಕರ್ತವ್ಯದಲ್ಲಿದ್ದ ಪೊಲೀಸರ ಕೊಲೆ ಯತ್ನ ನಡೆಸಿದ ಪ್ರಕರಣ ಹಾಗೂ ಮಹಿಳಾ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದಲ್ಲಿ ಭಾಗಿಯಾಗಿದ್ದ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು ಎಂದು ವರದಿ ತಿಳಿಸಿದೆ.

Also Read  ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ

error: Content is protected !!
Scroll to Top