ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ `SSLC’ ಪರೀಕ್ಷೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ SSLC ಪರೀಕ್ಷೆ ನಡೆಸದಂತೆ ಮಹತ್ವದ ಸೂಚನೆ ನೀಡಿದೆ ಎನ್ನಲಾಗಿದೆ.


SSLC ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಾಕ ಟೀಕೆ ವ್ಯಕ್ತಪಡಿಸಿದ್ದು, ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್/ಏಪ್ರಿಲ್ ನಲ್ಲಿ SSLC ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ ನೀಡಿದೆ.

Also Read  ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ


ಕಳೆದ ವರ್ಷ ರಾಜ್ಯದ 724 ಜಿಲ್ಲಾ, 755 ತಾಲೂಕು, 604 ಹೋಬಳಿ ಮತ್ತು 1,222 ಗ್ರಾಮೀಣ ಪ್ರದೇಶದ ಕೇಂದ್ರಗಳು ಸೇರಿ ರಾಜ್ಯಾದ್ಯಂತ ಒಟ್ಟಾರೆ 3,305 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಗ್ರಾಮೀಣ ಪ್ರದೇಶಗಳಿಗೆ ಕೊಕ್ ನೀಡಿ, ಹೋಬಳಿ, ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ.

error: Content is protected !!
Scroll to Top