ಬೈಂದೂರಿನಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಬೇಡಿಕೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.10. ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡುವಂತೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.


ಸಚಿವ ಪ್ರಧಾನ್ ಅವರನ್ನು ಭೇಟಿ ಮಾಡಿದ ಸಂಸದ ರಾಘವೇಂದ್ರ, ವಿದ್ಯಾಲಯದ ಅಗತ್ಯತೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಸಚಿವರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿರುವುದಾಗಿ ತಿಳಿಸಿದೆ.

Also Read  ಕರಾವಳಿಯಾದ್ಯಂತ ಇನ್ನೂ ಎರಡು ದಿನ ಧಾರಾಕಾರ ಮಳೆ ಸಾಧ್ಯತೆ

error: Content is protected !!
Scroll to Top