(ನ್ಯೂಸ್ ಕಡಬ)newskadaba.com ಮೈಸೂರು, ಆ.11. ಕಬ್ಬಿನ ಗದ್ದೆಯೊಂದರಲ್ಲಿ ಕಬ್ಬು ಬೆಳೆ ಕಟಾವಿನ ವೇಳೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ನಡೆದಿದ್ದು, ಕಬ್ಬು ಕಟಾವು ಮಾಡಲು ಬಂದಿದ್ದ ಕೂಲಿ ಕಾರ್ಮಿಕರು ಮರಿಗಳನ್ನು ರಕ್ಷಣೆ ಮಾಡಿದ್ದಾರೆ. ಟಿ.ನರಸೀಪುರ ತಾಲೂಕಿನ ಗುಡ್ಡದ ಕೊಪ್ಪಲು ಗ್ರಾಮದಲ್ಲಿ, ದೊರೆಸ್ವಾಮಿ ಎಂಬುವವರ ಜಮೀನಿನಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ ಎನ್ನಲಾಗಿದೆ.
ಅವರ ಜಮೀನಿನಲ್ಲಿ ಕಬ್ಬು ಬೆಳೆಯನ್ನು ಕಟಾವು ಮಾಡುವ ಸಮಯದಲ್ಲಿ, ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಕಾಣಿಸಿಕೊಂಡಿವೆ. ಈ ಚಿರತೆ ಮರಿಗಳನ್ನು ಕಬ್ಬು ಕಟಾವು ಮಾಡಲು ಬಂದಿದ್ದ ಕೂಲಿ ಕಾರ್ಮಿಕರು ರಕ್ಷಣೆ ಮಾಡಿದ್ದು, ರಕ್ಷಣೆ ಮಾಡಿದ ಚಿರತೆ ಮರಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.